ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ :ಜಿಲ್ಲೆಯ ಎರಡು ಶಾಸಕರು ಗೈರು -Vishwanews24
ಉಡುಪಿ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮಕ್ಕೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೈರು ಹಾಜರಾಗಿರುವುದು ಚರ್ಚೆಗೆ ಕಾರಣವಾಗಿದೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಸಚಿವ ಸ್ಥಾನಾಕ್ಷಾಂಕಿಯಾಗಿದ್ದರು. ಮಂತ್ರಿ ಸ್ಥಾನ ಸಿಗದಿರುವುದರಿಂದ ಬೇಸರಗೊಂಡಿದ್ದ ಹಾಲಾಡಿಇದೇ ಕಾರಣಕ್ಕೆ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ತನ್ನ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕೂಡಾ ಸಮಾರಂಭಕ್ಕೆ ಗೈರು ಹಾಜರಾಗಿದ್ದಾರೆ. ಕಾರ್ಯಕ್ರಮದಲ್ಲಿ ಇವರಿಬ್ಬರ ಅನುಪಸ್ಥಿತಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಉಳಿದ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಹಾಗೂ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
