ಉಡುಪಿ : ಮತ್ಸ್ಯ ಸಂಪದ ಯೋಜನೆ  : ಅರ್ಜಿ ಆಹ್ವಾನ – vishwanews24

Featured, ಉಡುಪಿ

ಉಡುಪಿ : ಮತ್ಸ್ಯ ಸಂಪದ ಯೋಜನೆ  : ಅರ್ಜಿ ಆಹ್ವಾನ

  ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ–ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾ್ಯಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ.

ಉಡುಪಿ : ಯುವಕ ನಾಪತ್ತೆ – vishwanews24

 ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

Leave a Reply