ಉಡುಪಿ : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು – vishwanews24

Featured, ಉಡುಪಿ

ಉಡುಪಿ :  ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು

ಉಡುಪಿ : ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06507 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13ರಂದು ಶುಕ್ರವಾರ ಅಪರಾಹ್ನ 12:30ಕ್ಕೆ ಯಶವಂತಪುರ ದಿಂದ ಹೊರಟು ಮರುದಿನ ಮುಂಜಾನೆ 6:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ನಂ.06508 ಮಡಗಾಂವ್ ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಫೆ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು ಮರುದಿನ ಮುಂಜಾನೆ 4:45ಕ್ಕೆ ಯಶವಂತಪುರ ತಲುಪಲಿದೆ.

ಉಡುಪಿ: ಕಾರು ಸ್ಕೂಟರ್‌ಗೆ ಡಿಕ್ಕಿ ; ಸವಾರ ಪ್ರಾಣಾಪಾಯದಿಂದ ಪಾರು – vishwanews24

ಈ ರೈಲಿಗೆ ಚಿಕ್ಕಬಾಣಾವರ, ಚೆನ್ನರಾಯಪಟ್ಟಮ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಡಬ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ ಹಾಗೂ ಕಾರವಾರಗಳಲ್ಲಿ ನಿಲುಗಡೆ ಇರಲಿದೆ.

ಈ ರೈಲು ಒಟ್ಟು 20 ಕೋಚ್‌ಗಳನ್ನು ಹೊಂದಿರಲಿದೆ. ಇವುಗಳಲ್ಲಿ ಫಸ್ಟ್ ಕ್ಲಾಸ್ 2ಟಯರ್ 1ಕೋಚ್, 2ಟಯರ್ ಎಸಿ-2, 3ಟಯರ್ ಎಸಿ-2, ಸ್ಲೀಪರ್ ಕೋಚ್-9, ಜನರಲ್-4 ಹಾಗೂ ಎಸ್‌ಎಲ್‌ಆರ್-2 ಕೋಚ್‌ಗಳಿರುತ್ತವೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ – vishwanews24

Leave a Reply