ಉಡುಪಿ: ಮಹಿಳೆ ನೇಣುಬಿಗಿದು ಆತ್ಮಹತ್ಯೆ – vishwanews24
ಉಡುಪಿ: ಮಹಿಳೆ ನೇಣುಬಿಗಿದು ಆತ್ಮಹತ್ಯೆ
ಉಡುಪಿ: ಮಹಿಳೆಯೋರ್ವಳು ಮನೆಯ ಅಡುಗೆ ಕೋಣೆಯಲ್ಲಿದ್ದ ಸೀಲಿಂಗ್ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹಿಂಭಾಗದಲ್ಲಿರುವ ಖಾಸಗಿ ವಸತಿ ಸಂಕೀರ್ಣದಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಶೋಭಾ ಎ ಕುಮಾರ್ (48) ಎಂದು ಗುರುತಿಸಲಾಗಿದೆ.
ಮಹಿಳೆಯ ಕೃತ್ಯವನ್ನು ಗಮನಿಸಿದ ನೆರೆ ಮನೆಯವರು, ತಕ್ಷಣ ಸಮಾಜ ಸೇವಕ ನಿತ್ಯಾನಂದ ಒಳಕಾಡುವರಿಗೆ ಕರೆ ನೀಡಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಒಳಕಾಡುವರು, ಮಹಿಳೆಯನ್ನು ನೇಣು ಕುಣಿಕೆಯಿಂದ ಬಿಡಿಸಿ, ಆಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಮಹಿಳೆಯನ್ನು ಪರೀಕ್ಷಿಸಿದ ವೈದ್ಯರಿಂದ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆ ಅಬ್ಬರ : ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24
ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೋಲಿಸ್ ಠಾಣೆಯ ಎಎಸ್ಐ ತಾರಾನಾಥ್, ನಾಗರತ್ನ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ತನಿಖೆ ಮುಂದುವರಿಸಲಾಗಿದೆ.
