ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ – vishwanews24

Featured, ಉಡುಪಿ

ಉಡುಪಿ:  ಮಾ.4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರಿಂಗ್ ಪದವಿಧರರು ಇದರ ಪ್ರಯೋಜನವನ್ನು ಪಡೆಯಿರಿ 56 ಕಂಪೆನಿಗಳು ಆಗಮಿಸಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ  – vishwanews24

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮಾತನಾಡಿ, ಪಾಸ್ ಹಾಗು ಫೇಲ್ ಆದವರಿಗೂ ಭಾಗವಹಿಸುವ ಅವಕಾಶ ಇದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಮಾ.4 ರಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈಗಾಗಲೇ 600 ಕ್ಕೂ ಅಧಿಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಣಿ ಮಾಡಿಸಿದ್ದಾರೆ. ಕಳೆದ ಬಾರಿಯ ಉದ್ಯೋಗ ಮೇಳದಲ್ಲಿ 170 ಅಭ್ಯರ್ಥಿಗಳಿಗೆ ಉತ್ತಮ ಕಂಪೆನಿಯಲ್ಲಿ ಉದ್ಯೋಗ ಲಭಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಡಿಕೆಶಿ : ವೀರಪ್ಪ ಮೊಯ್ಲಿ – vishwanews24

Leave a Reply