ಉಡುಪಿ: ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24
ಉಡುಪಿ: ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಫೆಡರೇಶನ್ ಸದಸ್ಯರ ಮಕ್ಕಳು 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕುಂದಾಪುರ: ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ vishwanews24
ಇತರ ವಿದ್ಯಾರ್ಥಿಗಳು 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2023-24 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿರಬೇಕು.
ದಿನಾಂಕ: 15.07.2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ನಿನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಮುಂದಿನ 4 ದಿನ ಮಳೆ ಸಾಧ್ಯತೆ : ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ – vishwanews24
