ಉಡುಪಿ: ಮೇ 16 ರಂದು ನೇರ ಸಂದರ್ಶನ – vishwanews24
ಉಡುಪಿ: ಮೇ 16 ರಂದು ನೇರ ಸಂದರ್ಶನ
ಉಡುಪಿ: ನಗರದ ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋರ‍್ಸ್ ಪ್ರೆöÊ.ಲಿ ಇಲ್ಲಿ ಮೇ 16 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ, 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
