ಉಡುಪಿ:  ಯುವಕ ನಾಪತ್ತೆ – vishwanews24

Featured, ಉಡುಪಿ

ಉಡುಪಿ:  ಯುವಕ ನಾಪತ್ತೆ

ಉಡುಪಿ: ಮಲ್ಪೆ ಬಂದರಿನ ಕಚೇರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ನಿವಾಸಿ ನಯನ್ ಕುಮಾರ್ (15 ವರ್ಷ 11 ತಿಂಗಳು) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ :  ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ – vishwanews24

Leave a Reply