ಉಡುಪಿ : ಯುವತಿ ನಾಪತ್ತೆ -vishwanews24

Featured, ಉಡುಪಿ

ಉಡುಪಿ : ಯುವತಿ ನಾಪತ್ತೆ

ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಲಿಯುತ್ತಿದ್ದ ನಗರದ ಎಂ.ಜಿ.ಎ ಬಳಿ ವಾಸವಿದ್ದ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂಬ ಯುವತಿಯು ಸೆಪ್ಟಂಬರ್ 12 ರಂದು ಬೆಳಗ್ಗೆ 11.30 ರ ಸುಮಾರಿಗೆ ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply