ಉಡುಪಿ: ರಾಜ್ಯದ ನೂತನ ಸಿಎಂ – ಡಿಸಿಎಂ ಪಟ್ಟಾಭಿಷೇಕ , ಪಟಾಕಿ ಸಿಡಿಸಿ ಸಂಭ್ರಮಿಸಿದ ಕೈ ಕಾರ್ಯಕರ್ತರು – Vishwanews24
ಉಡುಪಿ: ರಾಜ್ಯದ ನೂತನ ಸಿಎಂ – ಡಿಸಿಎಂ ಪಟ್ಟಾಭಿಷೇಕ , ಪಟಾಕಿ ಸಿಡಿಸಿ ಸಂಭ್ರಮಿಸಿದ ಕೈ ಕಾರ್ಯಕರ್ತರು
ಉಡುಪಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಉಡುಪಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ,ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.
ಇನ್ನು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಇಂದೇ ಕಾಂಗ್ರೆಸ್ ನೀಡಿದ್ದ 5 ಭರವಸೆ ಗ್ಯಾರಂಟಿ ಜಾರಿಗೆ : ಸಿಎಂ ಸಿದ್ಧರಾಮಯ್ಯ ಘೋಷಣೆ – Vishwanews24
