ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು – Vishwanews24
ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು
ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಎಂಬವರು ಡಿ.6ರಂದು ನಡೆಯಲಿರುವ ಅತ್ತೆಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬಯಿಯ ಪನ್ ವೇಲಿನಿಂದ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು.
ದುಡುಕಿನ ನಿರ್ಧಾರದಿಂದ ಹಾನಿ : ನೋಡಿ ಇಂದಿನ ದಿನ ಭವಿಷ್ಯ -Vishwanews24
ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಅಭರಣ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.

ರೈಲು ಮುಂಜಾನೆ 5.40 ಗಂಟೆಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ನ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ : ಹಸುವಿನ ಸೆಗಣಿ ಹೊಂಡಕ್ಕೆ ಬಿದ್ದು ನಾಲ್ಕು ವರ್ಷದ ಮಗು ಸಾವು – Vishwanews24
ರೈಲಿನಲ್ಲಿದ್ದ 4 ಜನ 40 ರಿಂದ 50 ವರ್ಷ ವಯಸ್ಸಿನ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
