ಉಡುಪಿ: ರೈಲ್ವೇ ಸ್ಟೇಶನ್ ಬಳಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ – Vishwanews24
ಉಡುಪಿ: ರೈಲ್ವೇ ಸ್ಟೇಶನ್ ಬಳಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ
ಉಡುಪಿ: ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಶನ್ನ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
45 ರಿಂದ 50 ವರ್ಷ ಪ್ರಾಯದ ಓರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಇದಾಗಿದ್ದು, ಈ ವ್ಯಕ್ತಿಯು ಮಾ.27 ರ ರಾತ್ರಿಯಿಂದ ಮಾ.28ರ ಬೆಳಿಗ್ಗೆಯ ಅವಧಿಯಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ವಿಷ್ಣು ಮೂರ್ತಿ ದೇವಾಲಯಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ – Vishwanews24
