ಉಡುಪಿ: ಲಾರಿಯಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು – Vishwanews24
ಉಡುಪಿ: ಲಾರಿಯಡಿ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ: ದ್ವಿಚಕ್ರ ವಾಹನ ಸವಾರರೊಬ್ಬರು ಎದುರಿನಿಂದ ಬಂದ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಹೇರೂರು ಮೂಲದ ಕೃಷ್ಣ ಗಾಣಿಗ ಮೃತ ವ್ಯಕ್ತಿ.
ಕೃಷ್ಣ ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಾ ಎದುರುಗಡೆಯಿಂದ ಬರುತ್ತಿದ್ದ ಲಾರಿಯಡಿಗೆ ಸಿಲುಕಿದ್ದಾರೆ.
ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
