ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

Featured, ಉಡುಪಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ

ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಉದ್ದೇಶದಿಂದ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ ಸಂಜೆ ಮಣಿಪಾಲದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿತ್ತು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾದ ಶಶಿಕಾಂತ್ ಶೆಟ್ಟಿ ಅವರು ಇತರ ಗಣ್ಯರೊಂದಿಗೆ ಸೇರಿ ತ್ರಿವರ್ಣ ಧ್ವಜದ ಬಣ್ಣಗಳುಳ್ಳ ಬಲೂನುಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಈ ವೇಳೆ ಮಾತನಾಡಿದ ಅವರು ದೇಶ ಮೊದಲು ಎಂಬ ಧ್ಯೇಯದೊಂದಿಗೆ ದೇಶದ ಅಭಿವೃದ್ದಿಗೆ ಪ್ರತಿಯೊಬ್ಬರು ಕೈಜೋಡಿಸಬೇಕಾಗಿದೆ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಉಡುಪಿ ಶಾಸಕ ಯಶಪಾಲ ಸುವರ್ಣ ಅವರು ಕೇವಲ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ ಸ್ವಾತಂತ್ರ್ಯದ ಸಂಭ್ರಮ ಸೀಮಿತವಾಗಿರಬಾರದು ಬದಲಾಗಿ ಪ್ರತಿಯೊಬ್ಬ ನಾಗರಿಕರು ಇದರಲ್ಲಿ ಭಾಗಿಯಾಗಬೇಕು ಎಂಬ ಉದ್ದೇಶದಿಂದ ಹರ್ ಘರ್ ತಿರಂಗ ಅಭಿಯಾನವನ್ನು ಕೈಗೊಳ್ಳಲಾಗಿದೆ. ಈ ಮೂಲಕ ದೇಶದ ಏಕತೆ ಮತ್ತು ಒಗ್ಗಟ್ಟು ಪ್ರಚುರ ಪಡಿಸುವ ಕೆಲಸ ಇದರಿಂದ ಸಾಧ್ಯವಾಗುತ್ತದೆ. ಅದರಂತೆ ಉಡುಪಿಯಲ್ಲಿ ಕೂಡ ಈ ಭಾಗದ ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು, ಬ್ಯಾಂಕ್ ಗಳನ್ನು ಸೇರಿಸಿಕೊಂಡು ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಮೂಲಕ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ದೇಶದ ಕುರಿತು ಚಿಂತನೆ ನಡೆಸಲು ಸಹಕಾರಿಯಾಗಲಿದೆ ಎಂದರು.

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಣಿಪಾಲದ ಗೋಲ್ಡನ್ ಜುಬಿಲೀ ಹಾಲ್ ಬಳಿ ಇರುವ ಕೆನರಾ ಬ್ಯಾಂಕ್ ವೃತ್ತ ಕಛೇರಿಯ ಬಳಿಯಿಂದ ಆರಂಭಗೊಂಡ ತಿರಂಗಾ ಯಾತ್ರೆಯು ಟೈಗರ್ ಸರ್ಕಲ್ – ಸಿಂಡಿಕೇಟ್ ಸರ್ಕಲ್ ಮೂಲಕ ಸಾಗಿ ಮಣಿಪಾಲ ಕಾಯಿನ್ ಸರ್ಕಲ್ ಬಳಿ ಸಮಾಪನಗೊಂಡಿತು. ತಿರಂಗಾ ಯಾತ್ರೆಯಲ್ಲಿ ಉಡುಪಿ ಮಣಿಪಾಲ ಭಾಗದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಡಾ. ಕೃಷ್ಣ ಪ್ರಸಾದ್, ಡಾ. ಚಂದ್ರಶೇಖರ್, ಡಾ. ವಿಜಯೇಂದ್ರ, ಜಯಕರ ಶೆಟ್ಟಿ ಇಂದ್ರಾಳಿ, ಅಜಯ್ ಪಿ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಅಮೀನ್, ಉಮೇಶ್ ನಾಯ್ಕ್ ಚೇರ್ಕಾಡಿ ಹಾಗೂ ಇತರರು ಉಪಸ್ಥಿತರಿದ್ದರು.

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

Leave a Reply