ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ – vishwanews24
ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ ಮೆರವಣಿಗೆ ಮೂಲಕ ರಥವನ್ನು ರಾಜಾಂಗಣಕ್ಕೆ ತರಲಾಯಿತು.
ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಧರ್ಮಸ್ಥಳ ಪ್ರಕರಣ : ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಡಿ. 29ಕ್ಕೆ ಮುಂದೂಡಿಕೆ – vishwanews24
ಈ ವೈಭವದ ಮೆರವಣಿಗೆಯಲ್ಲಿ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳು, ಸಂಸ್ಕೃತ ಕಾಲೇಜು ತಂಡದಿಂದ ವೇದಘೋಷ, ಬಿರುದಾವಳಿ, ವಿವಿಧ ಬಗೆಯ ಆಕರ್ಷಕ ಸ್ತಬ್ಧ ಚಿತ್ರಗಳು, ವಿವಿಧ ಬಗೆಯ ಆಕರ್ಷಕ ವೇಷಗಳು, ನಾಸಿಕ್ ಬ್ಯಾಂಡ್ ಸೇರಿದಂತೆ ವಿವಿಧ ಬಗೆಯ ವಾದ್ಯ ತಂಡಗಳು, ಭಜನಾ ತಂಡಗಳು ಪಾಲ್ಗೊಂಡಿದ್ದರು.

ನಂತರ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀಗಳು ಹಾಗೂ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಕ್ಕೆ ಪುಷ್ಪಾರ್ಚನೆ ಮಾಡಿ ಆರತಿ ಬೆಳಗಿಸಿ ಶ್ರೀ ಕೃಷ್ಣನಿಗೆ ರಥವನ್ನು ಸಮರ್ಪಿಸಿದರು. ನಂತರ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಕೊಪ್ಪಳ: ಮುಖ್ಯ ಶಿಕ್ಷಕನ ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲೆ 24 ವಿದ್ಯಾರ್ಥಿಗಳಿಗೆ ವಿಮಾನಯಾನ – vishwanews24
