ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ರಾಜ್ಯ ಸರ್ಕಾರ ಈ ಕೇಸ್‍ ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ : ಮುಖ್ಯಮಂತ್ರಿ – Vishwanews24

Featured, ಉಡುಪಿ

ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ : ಮುಖ್ಯಮಂತ್ರಿ

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಕಂಡುಕೊಳ್ಳುತ್ತೇವೆ. ರಾಜ್ಯ ಸರ್ಕಾರ ಈ ಕೇಸ್‍ನಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಅವರು 40 ಪರ್ಸೆಂಟ್ ಆರೋಪ ಮಾಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‍ನಲ್ಲಿ ಶವ ಪತ್ತೆ ಆಗಿದೆ. ಈಗಾಗಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ರೀತಿಯ ತನಿಖೆ ಆಗುತ್ತದೆ. ಇದರ ಪ್ರಾಥಮಿಕ ವರದಿ ಏನು ಬರುತ್ತದೆ ಎನ್ನುವುದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಸಾವಿನ ಹಿನ್ನೆಲೆ ಸಂಪೂರ್ಣವಾಗಿ ತನಿಖೆ ನಡೆಯುತ್ತದೆ ಎಂದು ಹೇಳಿದರು.

ಬೇಲೂರಿನ ಚೆನ್ನಕೇಶವ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ತೆರವು ಮಾಡಿಸಿ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ : ಹೆಚ್.ಡಿ.ಕುಮಾರಸ್ವಾಮಿ

ಪೊಲೀಸ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಹೇಳಿದ್ದೇವೆ. ಸಂತೋಷ್ ಸಾವಿನ ಕುರಿತು ಕಾನೂನು ಬದ್ಧವಾಗಿ ಆಗಬೇಕು. ಪಾರದರ್ಶಕ ತನಿಖೆ ಆಗುತ್ತದೆ. ಗುತ್ತಿಗೆದಾರ ಸಂತೋಷ್ ಮಾಡಿದ್ದ ಆರೋಪವನ್ನು ಈಶ್ವರಪ್ಪ ಅವರು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ಕೋಟ್‍ನಲ್ಲಿ ಕೇಸ್ ಹಾಕಿದ್ದಾರೆ. ಸಂತೋಷ್‍ಗೆ ನೋಟಿಸ್ ಹೋಗಿದೆ. ಇದೆಲ್ಲವನ್ನು ತನಿಖೆ ಸಂದರ್ಭದಲ್ಲಿ ಒಳಪಡುತ್ತದೆ. ಯಾವ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿಯುತ್ತದೆ ಎಂದು ಮಾಹಿತಿ ನೀಡಿದರು.

Leave a Reply