ಉಡುಪಿ: ಸತೀಶ್ ಜಾರಕಿಹೊಳಿ ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ : ಬಿಎಸ್ ವೈ – Vishwanews24

Featured, ಉಡುಪಿ

ಸತೀಶ್ ಜಾರಕಿಹೊಳಿ ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ 

ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು..

ಉಡುಪಿ :ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ತೀವ್ರವಾಗಿ ಖಂಡಿಸಿದೆ. ” ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ ” ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ನವರು ಖಂಡಿಸಿದ್ದಾರೆ. ಆದರೆ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು.ಹಿಂದುಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಹೇಳಿದ್ದಾರೆ.

ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ

Leave a Reply