ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24
ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ಸೇವಾ ಶುಲ್ಕ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ/ಜುಲ್ಮಾನೆಗಳನ್ನು ವಿಧಿಸಲಾಗುತ್ತಿದ್ದು, ಘನತ್ಯಾಜ್ಯ ವಸ್ತು ನಿರ್ವಹಣೆ ಮತ್ತು ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂಲದಲ್ಲಿಯೇ ಅಂದರೆ ಮನೆ ಮನೆಯಲ್ಲಿ, ವಾಣಿಜ್ಯ ಮಳಿಗೆಯಲ್ಲಿ ಹಾಗೂ ಕಸ ಉತ್ಪಾದನೆ ಮಾಡುವವರು ಘನ ತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಮತ್ತು ಅಪಾಯಕಾರಿ ಕಸವನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ನಗರಸಭೆಯ ವಾಹನಗಳಿಗೆ ನೀಡುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ :ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಯಾವುದೇ ಸಾರ್ವಜನಿಕ ಸ್ಥಳದಲ್ಲಿ, ಖಾಸಗಿ ಪ್ರದೇಶದಲ್ಲಿ ಕಸ ಹಾಕುವುದು/ ಕಸ ಎಸೆಯುವುದನ್ನು ನಿಷೇಧಿಸಲಾಗಿದ್ದು, ನಗರಸಭೆಯು ಸ್ವಚ್ಚತೆ ಕಾಪಾಡುವಲ್ಲಿ ಮುತುವರ್ಜಿ ವಹಿಸಿ ಸ್ವಚ್ಛ ನಗರವಾಗಲು ನಗರದಲ್ಲಿನ ತ್ಯಾಜ್ಯ ಬೀಳುವ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ಕಾವಲು ನಡೆಸಿ ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ದಂಡ ಹಾಕಲಾಗುತ್ತಿದ್ದು, ಈವರೆಗೆ ಒಟ್ಟು 3,22,400 ರೂ. ದಂಡ ವಸೂಲಿ ಮಾಡಲಾಗಿರುತ್ತದೆ.
ಇದನ್ನೂ ಓದಿ :ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಮಾರ್ಚ್ 3 ರಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಮಿಳುನಾಡಿನಿಂದ ಬಂದ ವಾಹನವು ತ್ಯಾಜ್ಯವನ್ನು ಸುರಿಯುತ್ತಿರುವುದನ್ನು ಪತ್ತೆ ಹಚ್ಚಿ 10,000 ರೂ. ದಂಡ ಹಾಗೂ ಮಾರ್ಚ್ 15 ರಂದು ಕಾರಿನಲ್ಲಿ ಬಂದು ತ್ಯಾಜ್ಯ ಎಸೆದವರಿಗೆ 5,000 ರೂ ದಂಡವನ್ನು ವಿಧಿಸಲಾಗಿರುತ್ತದೆ.
ಸಾರ್ವಜನಿಕರು, ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಹಾಕುವುದು ಕಂಡುಬAದಲ್ಲಿ ಇನ್ನು ಮುಂದೆ 25,000 ರೂ. ದಂಡವನ್ನು ವಿಧಿಸಿ ಕಠಿಣ ಕ್ರಮವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ :ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24
