ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ – vishwanews24

Featured, ಉಡುಪಿ

ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾö್ಯಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ:👇

ಉಡುಪಿ: ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂ ದ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗ ಬಹುದು ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡದಂತೆ ಅವರುಗಳಿಗೆ ಪ್ರಸ್ತುತ ಸನ್ನಿವೇಶವನ್ನು ವಿವರಿಸಿ, ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂಬುದನ್ನು ಗ್ರಾಹಕರುಗಳಿಗೆ ಮನದಟ್ಟು ಮಾಡಿಸಬೇಕು ಎಂದರು.

ಜಿಲ್ಲೆಯಲ್ಲಿ ಹೆಚ್ಚು ಗೃಹ ಬಳಕೆದಾರರು ಎರಡು ಅನಿಲ ಸಂಪರ್ಕ ಹೊಂದಿದ್ದು, ಏಕ ಸಿಲಿಂಡರ್ ಹೊಂದಿದ್ದವರಿಗೆ ಆದ್ಯತೆಯ ಮೇಲೆ ಅನಿಲ ಪೂರೈಕೆ ಮಾಡಬೇಕು. ಅನಿಲದ ಮಿತ ಬಳಕೆಯ ಬಗ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಮತ್ತು ಇತರರಿಗೆ ಜಾಗೃತಿ ಮೂಡಿಸಬೇಕು. ಆರೋಗ್ಯ, ವಾಣಿಜ್ಯ, ಕೈಗಾರಿಕೆ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಪೊಲೀಸ್ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಅಗತ್ಯವಿರುವ ಅನಿಲ ಸಿಲಿಂಡರ್‌ಗಳ ಬೇಡಿಕೆಯ ಪಟ್ಟಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.

ಬೇಡಿಕೆಯ ಭಾಗವನ್ನು ನಿರ್ವಹಿಸಲು ಪ್ರತಿ ಗ್ರಾಹಕರಿಗೆ ಕೊನೆಯ ಮರುಪೂರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್-ಬುಕಿಂಗ್ ಅವಧಿಯನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ಪ್ರಚುರಪಡಿಸಬೇಕು ಎಂದ ಅವರು, ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಇದನ್ನೂ ಓದಿ:👇

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿಗೆ ಅಧಿವೇಶನದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅನಿಲ ಪೂರೈಕೆ ಕುರಿತು ಸಾರ್ವಜನಿಕ ಜಾಲತಾಣಗಳ ಮೂಲಕ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದ ಅವರು, ಸಾರ್ವಜನಿಕರು ತೊಂದರೆ ಗಳನ್ನು ನಿವಾರಿಸಲು ಸಹಾಯವಾಣಿ ಸಂಖ್ಯೆಯನ್ನು 112 ಪ್ರಚಾರಪಡಿಸುವುದರೊಂದಿಗೆ ಸ್ವೀಕರಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸುವಂತೆ ತಿಳಿಸಿದರು.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ, ಶೇಖರಣೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು, ಸಾಗಾಣಿಕೆ ಹಾಗೂ ರಿಫಿಲ್ಲಿಂಗ್ ಪ್ರಕರಣಗಳು ಕಂಡುಬoದಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಅನಾವಶ್ಯಕವಾಗಿ ಜನರು ಗೃಹ ಬಳಕೆಯ ಅನಿಲಗಳನ್ನು ಆಟೋಮೋಬೈಲ್ ಗಳಿಗೆ ಬಳಸದಂತೆ ನೋಡಿಕೊಳ್ಳಬೇಕು. ಅನಿಲಗಳು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಲು ಗ್ಯಾಸ್ ಏಜೆನ್ಸಿಯ ಸಪ್ಲೆöÊರ‍್ಸ್, ಡೀರ‍್ಸ್ ಹಾಗೂ ಕಂಪನಿಗಳ ಸಹಕಾರ ಅತ್ಯಗತ್ಯ ಎಂದರು.

ಇದನ್ನೂ ಓದಿ:👇

ಉಡುಪಿ: ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಗ್ಯಾಸ್ ಏಜೆನ್ಸಿಯ ಮಾಲೀಕರುಗಳು, ಸರಬರಾಜುದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply