ಉಡುಪಿ: ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಉಡುಪಿ: ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ : ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಅವರ ಪಠ್ಯ ಪುಸ್ತಕವನ್ನು ಹರಿದಿರುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ, ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ. ಡಿಕೆಶಿಯವರು ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು, ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ : ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ – Vishwanews24
