ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24

Featured, ಉಡುಪಿ

ಉಡುಪಿ : ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ – Vishwanews24

ಉಡುಪಿ : ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ,ಕರ್ನಾಟಕ ರಜ್ಯ ಏಡ್ಸ್ ಪ್ರಿವೇನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ,ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ಉಡುಪಿ, 6 ಕರ್ನಾಟಕ ನೌಕಾದಳ ಎನ್‌ಸಿಸಿ ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ಘಟಕ, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 2021 ಕಾರ್ಯಕರಮವು ಅಕ್ಟೋಬರ್ 7 ರಂದು ಬೆಳಗ್ಗೆ 10 ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣ,ಅನ0ತನಗರ ಮಣಿಪಾಲ ದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಉದ್ಘಾಟಿಸಿ,ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಯಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲೆ ಸಹನಾ, ಉಡುಪಿ
ಜಿಲ್ಲಾ ಸರಕಾರಿ ನೌಕರರ ಸಂಘ (ರಿ) ನ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, 6 ಕರ್ನಾಟಕ ನೌಕಾದಳ ಎನ್‌ಸಿಸಿ ಯ ಲೆ.ಕಮಾಂಡರ್ ರಿಕಿ ಪೆರೇರಾ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಅಧ್ಯಕ್ಷ ಆನಂದ್ ಗಾಣಿಗ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ ಭಾಗವಹಿಸಲಿದ್ದಾರೆ.

ಗ್ರಾಹಕರಿಗೆ ಶಾಕ್ : ಮತ್ತೆ ಏರಿಕೆಯಾದ ಎಲ್‌ಪಿಜಿ ಸಿಲಿಂಡರ್‌ – Vishwanews24