ಉಡುಪಿ: ಹವಾಮಾನ ವೈಪರಿತ್ಯ – ಪ್ರವಾಸಿ ತಾಣಗಳಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ – vishwanews24

Featured, ರಾಜ್ಯ ನ್ಯೂಸ್

ಉಡುಪಿ: ಹವಾಮಾನ ವೈಪರಿತ್ಯ – ಪ್ರವಾಸಿ ತಾಣಗಳಲ್ಲಿ ವಾಟರ್‌ ಸ್ಪೋರ್ಟ್ಸ್ ತಾತ್ಕಾಲಿಕ ನಿರ್ಬಂಧ

ಉಡುಪಿ: ಜಿಲ್ಲಾದ್ಯಂತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಹವಾಮಾನ ವೈಪರಿತ್ಯದಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೆಲವು ಪ್ರವಾಸೋದ್ಯಮ ಚಟುವಟಿಕೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧಿಸಿದೆ.

ವಿಶೇಷವಾಗಿ ಬೇಸಗೆ ಹಿನ್ನೆಲೆಯಲ್ಲಿ ವಾಟರ್‌ ಸ್ಪೋರ್ಟ್ಸ್ ಇರುವ ಜಾಗಗಳಿಗೆ ಹೆಚ್ಚೆಚ್ಚು ಮಂದಿ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ  -vishwanews24

ಜಿಲ್ಲೆಯ ಗುಡುಗು ಸಿಡಿಲು ಸಹಿತ ಗಾಳಿ ಮಳೆಯ ವಾತಾವರಣ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಜಿಲ್ಲಾಡಳಿತದಿಂದ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆಯಲ್ಲಿ ವಾಟರ್‌ ಸ್ಪೋರ್ಟ್ಸ್ ಚಟುವಟಿಕೆಗಳಿಗೂ ನಿರ್ಬಂಧ ಹೇರಲಾಗಿದೆ.

ಗಾಳಿ ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ವಾಟರ್‌ ನ್ಪೋರ್ಟ್ಸ್ ಚಟುವಟಿಕೆಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಹವಾಮಾನ ತಿಳಿಯಾದಂತೆ ಪುನರ್‌ ಆರಂಭಿಸಲು ಅವಕಾಶ ನೀಡುವ ಸಾಧ್ಯತೆಯಿದೆ. ಒಂದೊಮ್ಮೆ ಮುಂಗಾರು ನಿರೀಕ್ಷೆಗೂ ಮೊದಲೇ ಪ್ರವೇಶ ಮಾಡಿದರೆ ಸದ್ಯಕ್ಕೆ ವಾಟರ್‌ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆಯಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್‌ ಸಿ.ಯು. ತಿಳಿಸಿದ್ದಾರೆ.

ಪ್ರಜ್ವಲ್ ಪೆನ್‍ಡ್ರೈವ್ ವೀಡಿಯೋ, ಫೋಟೋಗಳ ಬಗ್ಗೆ ಅನುಮಾನ  : ಹೆಚ್‍ಡಿಕೆ – vishwanews24

Leave a Reply