ಉಡುಪಿ : ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿ ತೆರವು : ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್

Featured, ಉಡುಪಿ

ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ..

ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ..

ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು , ನಿರಂತರ ಬಂದ್ ಮಾಡಿಸುವ ಪ್ಲ್ಯಾನ್..

ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು..

ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ.

ಮಾತನಾಡಿದ ನಜೀರ್, ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು.

ಉಡುಪಿ : ಜಾಮಿಯಾ ಮಸೀದಿ ಬಳಿ ನಿರ್ಮಾಣ ಮಾಡಿದ್ದ SDPI ಜಿಲ್ಲಾಧ್ಯಕ್ಷರ ಅಕ್ರಮ ಕಟ್ಟಡ ತೆರವು – Vishwanews24

ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್‍ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರವು ಮಾಡುತ್ತಾರಾ? ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು. ಒಂದು ಅಂಗಡಿಗೆ ಡೋರ್ ನಂಬರ್ ಇದೆ ಇನ್ನೊಂದಕ್ಕೆ ಇಲ್ಲ. ಅಂಗಡಿ ಪರವಾನಿಗೆಗೆ ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.

ರೈತ ಬಾಂಧವರ ಅಭಿವೃದ್ಧಿಗಾಗಿ ಮತ್ತೊಮ್ಮೆ ಸಾಲ ಮನ್ನಾ ಆಗುವ ಆಶಯವಿದ್ದರೆ ಜೆ.ಡಿ.ಎಸ್‌. ಬೆಂಬಲಿಸಿ : ಎಚ್‌.ಡಿ. ಕುಮಾರಸ್ವಾಮಿ

Leave a Reply