ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ – vishwanews24
ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ
ISPRL ಬಿಡ್ ಗೆದ್ದ ಮೇಘಾ ಎಂಜಿನಿಯರಿಂಗ್ ಕಂಪನಿ
214 ಎಕರೆ ಜಾಗದಲ್ಲಿ ಘಟಕ ನಿರ್ಮಾಣ
ಮೇಘಾ ಇಂಜಿನಿಯರಿಂಗ್ ಇನ್ಫಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ಬಿಡ್ ಗೆದ್ದುಕೊಂಡಿದೆ. ಐಎಸ್ಪಿಆರ್ಎಲ್ ಬಿಡ್ ಅನ್ನು ಖಾಸಗಿ ಕಂಪನಿ ಮೊದಲ ಬಾರಿಗೆ ಗೆದ್ದುಕೊಂಡಿದ್ದು ಸುಮಾರು 5,700 ಕೋಟಿ ರೂ ವೆಚ್ಚದಲ್ಲಿ 2.5 ದಶಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವಿರುವ ತೈಲ ಸಂಗ್ರಹಣಾ ಘಟಕ ನಿರ್ಮಿಸಲಾಗುವುದು.
ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಪಾದೂರಿನಲ್ಲಿ 214 ಎಕರೆ ಭೂಮಿಯನ್ನು ಐಎಸ್ಪಿಆರ್ಎಲ್ ಮೇಘಾ ಇಂಜಿನಿಯರಿಂಗ್ ಕಂಪನಿಗೆ ಉಚಿತವಾಗಿ ಹಸ್ತಾಂತರಿಸಲಿದೆ. ಈಗಾಗಲೇ ಐಎಸ್ಪಿಆರ್ಎಲ್ ಪಾದೂರಿನಲ್ಲಿ ತೈಲ ಸಂಗ್ರಹಣಾ ಘಟಕವನ್ನು ಸ್ಥಾಪಿಸಿದೆ. ಎರಡನೇ ಹಂತದ ಘಟಕ ಸ್ಥಾಪನೆ ಮಾಡುವ ಸಂಬಂಧ ದೇಶೀಯ ಮತ್ತು ಜಾಗತಿಕ ಕಂಪನಿಗಳಿಂದ ಐಎಸ್ಪಿಆರ್ಎಲ್ ಬಿಡ್ ಆಹ್ವಾನಿಸಿತ್ತು. ಆದರೆ ಈ ಬಿಡ್ನಲ್ಲಿ ಜಾಗತಿಕ ಕಂಪನಿಗಳು ಭಾಗವಹಿಸಿರಲಿಲ್ಲ ಎಂದು ವರದಿಗಳು ತಿಳಿಸಿವೆ.
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಅಜೆಂಡ : ಕೆ.ಎಸ್.ಈಶ್ವರಪ್ಪ – vishwanews24
ಒಪ್ಪಂದದ ಪ್ರಕಾರ, ಮೇಘಾ ಕಂಪನಿಯು ಸರ್ಕಾರ ಅಥವಾ ತೈಲ ಕಂಪನಿಗಳಿಗೆ ಶೇಖರಣಾ ಸ್ಥಳವನ್ನು ಗುತ್ತಿಗೆ ನೀಡುವ ಮೂಲಕ ಆದಾಯ ಸಂಗ್ರಹಿಸಬಹುದಾಗಿದೆ. ಆದರೆ ತುರ್ತು ಸಂದರ್ಭಗಳಲ್ಲಿ ಸಂಗ್ರಹಿಸಿದ ತೈಲದ ಮೇಲೆ ಸರ್ಕಾರವು ಮೊದಲ ಹಕ್ಕನ್ನು ಹೊಂದಿರಲಿದೆ. ಈ ಗುತ್ತಿಗೆಯ ಪ್ರಕಾರ ಮೇಘಾ ಇಂಜಿನಿಯರಿಂಗ್ ಕಂಪನಿ 5 ವರ್ಷದ ಒಳಗಡೆ ಘಟಕ ನಿರ್ಮಿಸಬೇಕು. ಜೊತೆಗೆ 60 ವರ್ಷಗಳ ವರೆಗೆ ನಿರ್ವಹಣೆ ಮಾಡಬೇಕಾಗುತ್ತದೆ.

ತೈಲ ಸಂಗ್ರಹಗಾರದ ಅಗತ್ಯವೇನು?
ವಿಶ್ವದಲ್ಲಿ ಹಲವಾರು ದೇಶಗಳು ತುರ್ತು ಸಂದರ್ಭಕ್ಕೆಂದು ತೈಲ ಸಂಗ್ರಹ ಮಾಡುತ್ತವೆ. ಚೀನಾದ 1,200 ದಶಲಕ್ಷ ಬ್ಯಾರೆಲ್ ತೈಲವನ್ನು ಸಂಗ್ರಹ ಮಾಡುವ ಮೂಲಕ ಮುಂಚೂಣಿಯಲ್ಲಿದ್ದರೆ, ಅಮೆರಿಕ 714 ದಶಲಕ್ಷ ಬ್ಯಾರೆಲ್ ತೈಲವನ್ನು ಸಂಗ್ರಹಿಸಿ ಎರಡನೇ ಸ್ಥಾನದಲ್ಲಿದೆ.
ಪ್ರಸ್ತುತ ಭಾರತ 5.33 ದಶಲಕ್ಷ ಬ್ಯಾರೆಲ್ ಟನ್ ತೈಲವನ್ನು ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ತೈಲವನ್ನು 9 ದಿನಗಳ ತುರ್ತು ಅವಶ್ಯಕತೆಗಳನ್ನು ಪೂರೈಸಲು ಮಾತ್ರ ಸಾಕು. ಮುಂದಿನ 10 ವರ್ಷಗಳಲ್ಲಿ ಭಾರತ 15 ದಶಲಕ್ಷ ಬ್ಯಾರೆಲ್ ಟನ್ ತೈಲವನ್ನು ಸಂಗ್ರಹಿಸಲು ಯೋಜಿಸಿದೆ. ಇಂಟರ್ನ್ಯಾಷನಲ್ ಎನರ್ಜಿ ಏಜೆನ್ಸಿ(ಐಇಎ) ತನ್ನ ಸದಸ್ಯ ರಾಷ್ಟ್ರಗಳು 90 ದಿನಗಳ ಕಾಲ ತೈಲ ಸಂಗ್ರಹವನ್ನು ಹೊಂದಿರಬೇಕೆಂದು ತಿಳಿಸಿದೆ.
ಮಾಜಿ ಸಿಎಂ ಸದನಾಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಕಳ್ಳರು – vishwanews24
ಭಾರತದಲ್ಲಿ ಎಲ್ಲೆಲ್ಲಿ ತೈಲ ಸಂಗ್ರಗಣಾ ಘಟಕಗಳಿವೆ?
ಐಎಸ್ಪಿಆರ್ಎಲ್ ಮಂಗಳೂರು, ಉಡುಪಿ ಬಳಿಯ ಪಾದೂರು, ವಿಶಾಖಪಟ್ಟಣಂನಲ್ಲಿ ಭೂಗತ ತೈಲ ಸಂಗ್ರಹಣ ಘಟಕಗಳನ್ನು ಸ್ಥಾಪಿಸಿದೆ. ಮೂರು ತೈಲ ಸಂಗ್ರಹಗಾರಗಳ ಪೈಕಿ ಪಾದೂರಿನಲ್ಲಿ ಅತಿ ಹೆಚ್ಚು ತೈಲವನ್ನು ಸಂಗ್ರಹ ಮಾಡಬಹುದಾಗಿದೆ. ಪಾದೂರಿನಲ್ಲಿ 2.5 ದಶಲಕ್ಷ ಟನ್(17 ದಶಲಕ್ಷ ಬ್ಯಾರೆಲ್), ಮಂಗಳೂರಿನಲ್ಲಿ 1.5 ದಶಲಕ್ಷ ಟನ್, ವಿಶಾಖಪಟ್ಟಣದಲ್ಲಿ 1.33 ದಶಲಕ್ಷ ಟನ್ ತೈಲವನ್ನು ಸಂಗ್ರಹ ಮಾಡಬಹುದಾಗಿದೆ.
ಶೇ.83ರಷ್ಟು ತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. 65 ದಿನಗಳಿಗೆ ಆಗುವಷ್ಟು ತೈಲವನ್ನು ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯ ರಿಫೈನರಿಗಳನ್ನು ಹೋಮದಿವೆ. 90 ದಿನಗಳ ಬಳಕೆಗೆ ಆಗುವಷ್ಟು ತೈಲ ಸಂಗ್ರಹಿಸುವ ನಿಟ್ಟಿನಲ್ಲಿ ಐಎಸ್ಪಿಆರ್ಎಲ್ ಒಡಿಶಾದ ಚಂಡಿಕೋಲ್, ರಾಜಸ್ಥಾನದ ಬಿಕಾನೆರ್, ಗುಜರಾತಿನ ರಾಜ್ಕೋಟ್ ಬಳಿ ಭೂಗತ ತೈಲಗಾರ ನಿರ್ಮಿಸಲು ಚಿಂತನೆ ನಡೆಸಲಾಗುತ್ತಿದೆ.
ಕೋವಿಡ್ 19ನಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ ಕಂಡಿತ್ತು. ಈ ಸಂದರ್ಭದಲ್ಲಿ ಭಾರತ ಕಡಿಮೆ ದರದಲ್ಲಿ ತೈಲವನ್ನು ಖರೀದಿಸಿ ಈ ಸಂಗ್ರಹಾಗಾರದಲ್ಲಿ ಸಂಗ್ರಹಿಸಿ ಭರ್ತಿ ಮಾಡಿತ್ತು. ಇದರಿಂದಾಗಿ ಒಟ್ಟು 5 ಸಾವಿರ ರೂ. ಕೋಟಿ ರೂ. ವಿದೇಶಿ ವಿನಿಮಯ ಉಳಿತಾಯವಾಗಿತ್ತು ಎಂದು ಪೆಟ್ರೋಲಿಯಂ ಸಚಿವಾಲಯ ಮಾಹಿತಿ ನೀಡಿತ್ತು.
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲ: ಸಚಿವ ಸಂಪುಟ ಸಭೆ ಅನುಮೋದನೆ – vishwanews24
