ಉದ್ಯಾವರ ಕಾರು ಅಪಘಾತ : ಮಾನವೀಯತೆ ಮೌಲ್ಯ ಎತ್ತಿ ಹಿಡಿದ ಕಾಪು ಶಾಸಕ : vishwanews24

Featured, ಉಡುಪಿ

ಉದ್ಯಾವರದಲ್ಲಿ ಕಾರು ಅಪಘಾತ, ಮಾನವೀಯತೆ ಮೌಲ್ಯ ಎತ್ತಿ ಹಿಡಿದ ಕಾಪು ಶಾಸಕ : vishwanews24

ಕಾಪು: ಉದ್ಯಾವರ ಸೇತುವೆ ಹತ್ತಿರದ ಡೈವೋರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಉದ್ಯಾವರದ ಖಾಸಾಗಿ ಶೋರೂಂ‌ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆಯ, ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಹಕರಿಸಿದರು. 

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply