ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ
ಉಡುಪಿ: ಉದ್ಯಾವರ ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆಯಾಗಿದ್ದು, ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮಂಗಳವಾರ ಸ್ಕೂಟರ್ ಸೇತುವೆಯ ಮೇಲೆ ಅನಾಥವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಹೊಳೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆದರೆ ಈವರೆಗೆ ವ್ಯಕ್ತಿಯ ಯಾವುದೇ ಸುಳಿವು ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ. ಪತ್ತೆಯಾದ ಸ್ಕೂಟರ್ ಪಿತ್ರೋಡಿ ನಿವಾಸಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
