ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್ -Vishwanews24

ಕಲಬುರಗಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜನರ ಸ್ಪಂದಿಸುವಲ್ಲಿ ವಿಫಲವಾಗಿದ್ದು, ಇದೇ ವಿಷಯವನ್ನು ಮುಂದಿಟ್ಟಿಕೊಂಡು ಮೂರು ಉಪಚುನಾವಣೆಗಳನ್ನು ಎದುರಿಸಲಾಗುವುದು ಎಂದು ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಮೂರರಲ್ಲೂ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ :ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಅವುಗಳನ್ನು ಕಿತ್ತೆಸೆಯಬೇಕಿದೆ : ಈಶ್ವರ ಖಂಡ್ರೆ -Vishwanews24

ಬಿಜೆಪಿ ಸರ್ಕಾರಗಳ ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಕೋವಿಡ್ ಕಾಲದಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು, ಯುವಕರು.. ಹೀಗೆ ಯಾರಿಗೂ ಅನುಕೂಲವಾಗುವ ಕೆಲಸ ಮಾಡಿಲ್ಲ. ಯಾರಿಗೂ ಉದ್ಯೋಗ ಕೊಡಲಿಲ್ಲ. ಬಿಜೆಪಿ ವೈಫಲ್ಯಗಳೇ ಕಾಂಗ್ರೆಸ್ ಗೆಲುವಿಗೆ ಸುಲಭವಾಗಲಿದೆ ಎಂದು ವಿಶ್ಲೇಷಿಸಿದರು.

ಸಿಡಿ ಪ್ರಕರಣದ ಪ್ರತಿಕ್ರಿಯಿಸಿದ ಅವರು, ಅಧಿವೇಶನದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಈಗ ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಅವರ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ನನಗೆ ಎಸ್‌ಐಟಿ ನೋಟಿಸ್ ಯಾಕೆ ಕೊಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ :ರಾಜ್ಯದಲ್ಲಿ 15 ದಿನಗಳ ಕಾಲ ಯಾವುದೇ ಪ್ರತಿಭಟನೆ, ರಾಜಕೀಯ ರ‍್ಯಾಲಿ ಗಳನ್ನು ನಡೆಸಲು ಅವಕಾಶ ಇಲ್ಲ : ಸಿಎಂ ಬಿಎಸ್ ವೈ -Vishwanews24