ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

Featured, ರಾಜ್ಯ ನ್ಯೂಸ್

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

ಬೆಂಗಳೂರು: ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ ಬೆಂಬಲದಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ನಾಮ ಪತ್ರ ಸಲ್ಲಿಸಿದರು.. ಆ ಮೂಲಕ, ಬಿಜೆಪಿ– ಜೆಡಿಎಸ್ ನಡುವೆ ಮತ್ತೊಂದು ಸುತ್ತಿನ ‘ಮೈತ್ರಿ’ ಆರಂಭಗೊಂಡಿದೆ.

ಬಿಜೆಪಿ ಸದಸ್ಯ ಎಂ.ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್‌ನ ಬಸವರಾಜ ಹೊರಟ್ಟಿ, ಕೋನರೆಡ್ಡಿ ಉಪಸ್ಥಿತತರಿದ್ದರು.

ಉಪಸಭಾಪತಿ ಚುನಾವಣೆಗೆ  ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ,ಮುಖ್ಯ ಸಚೇತಕ ನಾರಾಯಣ್ ಸ್ವಾಮಿ, ಬಿಕೆ ಹರೀಪ್ರಸಾದ್ ಉಪಸ್ಥಿತರಿದ್ದರು.

ಜೆಡಿಎಸ್ ಮುಖಂಡ ಎಸ್.ಎಲ್. ಧರ್ಮೇಗೌಡರ ನಿಧನದಿಂದ ಉಪ ಸಭಾಪತಿ ಸ್ಥಾನ ತೆರವಾಗಿತ್ತು. ಸಭಾಪತಿ ಸ್ಥಾನ ಜೆಡಿಎಸ್‌ನ ಬಸವರಾಜ ಹೊರಟ್ಟಿ ಪಾಲಾಗಲಿದೆ.

ವಿಧಾನಮಂಡಲ ಅಧಿವೇಶ ಆರಂಭ : ಕೊರೊನಾ ಸಂದರ್ಭ ರಾಜ್ಯ ಸರ್ಕಾರ ಉತ್ತಮ ಕಾರ್ಯ ಕೈಗೊಂಡಿದೆ : ಶ್ಲಾಘಿಸಿದ ರಾಜ್ಯಪಾಲ ವಜುಭಾಯಿ ವಾಲಾ -Vishwanews24

ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಬಿಜೆಪಿ ಪ್ರಾಬಲ್ಯ ಹೊಂದಿಲ್ಲದಿರುವುದರಿಂದ ಮಸೂದೆಗಳು ಅಂಗೀಕಾರವಾಗುವಲ್ಲಿ ಜೆಡಿಎಸ್ ಜೊತೆಗಿನ ಈ ಮೈತ್ರಿ ನೆರವಿಗೆ ಬರಲಿದೆ.

ಪರಿಷತ್ ನಲ್ಲಿ 31 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದರೂ 75 ಸದಸ್ಯ ಬಲದ ಸದನದಲ್ಲಿ ಜೆಡಿಎಸ್ ನ 13 ಸದಸ್ಯರ ಬೆಂಬಲ ಈಗಲೂ ಅಗತ್ಯವಾಗಿದೆ.  ಕಾಂಗ್ರೆಸ್‌ನ 28, ಪಕ್ಷೇತರ ಒಬ್ಬರು ಇದ್ದಾರೆ. ಒಂದು ಸ್ಥಾನ ಈ ಖಾಲಿ ಇದೆ. ಸಭಾಪತಿ ಸ್ಥಾನವನ್ನು ಬಯಸಿರುವ ಜೆಡಿಎಸ್, ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡುವುದಾಗಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಿತ್ತು.

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24