ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ :ಬಿ.ಎಸ್.ವೈ -Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ,, ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಶ್ಚಯವಾಗಿದೆ. ಈ ಹಿಂದೆ 15 ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದರು. ಅವರಿಗೆ ಪಕ್ಷದ ಟಿಕೆಟ್ ನೀಡಲು ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ ಎಂದರು.

ಅನರ್ಹ ಶಾಸಕರನ್ನು ನಿಲ್ಲಿಸಿ, ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಸರ್ಕಾರ ಬರಲು ಕಾರಣರಾದವರ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತೇವೆ. ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಯಾರ ಹೇಳಿಕೆ ಬಗ್ಗೆಯೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.

ಕಳೆದ ಬಾರಿ ಇದೀಗ ಅನರ್ಹ ಶಾಸಕರಾಗಿರುವ ವಿರುದ್ಧ ಸೋತಿದ್ದ ಬಿಜೆಪಿ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಸುಳಿವು ನೀಡಿದರು.