ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ – Vishwanews24

Featured, ದಕ್ಷಿಣ ಕನ್ನಡ

ಉಪ್ಪಿನಂಗಡಿ : ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ  ಅಲೆಮಾರಿ ದಂಪತಿ

ಉಪ್ಪಿನಂಗಡಿ : ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನ ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ದಂಪತಿಗಳು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸದ್ಯ ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಉಡುಪಿ :ನಾಪತ್ತೆಯಾದ ಬಾಲಕನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು – Vishwanews24

ಈ ಎರಡು ಮಕ್ಕಳನ್ನು ಜೂನ್ 2ರಂದು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಮಾನವೀಯತೆ ಮೆರೆದ‌ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.

ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ – Vishwanews24

Leave a Reply