ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ :- ಕಾರ್ಮಿಕ ಸಾವು – Vishwanews24
ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ -ಕಾರ್ಮಿಕ ಸಾವು
ಉಪ್ಪಿನಂಗಡಿ: ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿರುವ ಇಂಡಿಯನ್ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಜ.18ರಂದು ಮಧ್ಯಾಹ್ನ ನಡೆದಿದೆ.

ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ.
ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಇನ್ನು ಸ್ಫೋಟದಿಂದಾಗಿ ಅಂಗಡಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Join our Whatsapp group by clicking the below link 👇👇
