ಉಪ್ಪಿನಂಗಡಿ – ತುಳು ಭಾಷೆ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – Vishwanews24
ಉಪ್ಪಿನಂಗಡಿ – ತುಳು ಭಾಷೆ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ :
ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ.
ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ.
ಈ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ವರಾಂಡದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.
ನನ್ನ ಅಮೃತ ಮಹೋತ್ಸವದಲ್ಲಿ ಸೇರಿದ್ದ ಜನಸ್ತೋಮ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ : ಸಿದ್ದರಾಮಯ್ಯ – Vishwanews24
