ಉಮೇಶ್‌ ಜಾಧವ್‌ ರಾಜೀನಾಮೆ ಅಂಗೀಕಾರ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದ ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಸೋಮವಾರ ಅಂಗೀಕರಿಸಿದ್ದಾರೆ.

ಚಿಂಚೋಳಿ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್‌ ಜಾಧವ್‌ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಉಮೇಶ್‌ ಜಾಧವ್‌ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ರಮೇಶ್‌ ಕುಮಾರಸ್‌ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಡಾ. ಉಮೇಶ್‌ ಜಾಧವ್‌, ಈಗ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.