ಉಳ್ಳಾಲ ಉರೂಸ್: ತುಂಡಾಗಿ ಬಿದ್ದ ಜಾಯಿಂಟ್ ವೀಲ್ : ಹಲವರಿಗೆ ಗಾಯ – Vishwanews24
ಉಳ್ಳಾಲ ಉರೂಸ್: ತುಂಡಾಗಿ ಬಿದ್ದ ಜಾಯಿಂಟ್ ವೀಲ್ : ಹಲವರಿಗೆ ಗಾಯ – Vishwanews24
ಮಂಗಳೂರು: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವೀಲ್ ತುಂಡಾಗಿ ಬಿದ್ದು, ನಾಲ್ವರು ಮಕ್ಕಳು ಸೇರಿದಂತೆ ಹಲವರಿಗೆ ಗಾಯಗೊಂಡ ಘಟನೆ ಕಳೆದ ರಾತ್ರಿ ನಡೆದಿದೆ.
ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವೀಲ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ, ಏಕಾಏಕಿ ವೀಲ್ ಜಾಯಿಂಟ್ ತಪ್ಪಿದ ಪರಿಣಾಮ ಮಕ್ಕಳು ಕೆಳಕ್ಕೆ ಬಿದ್ದರು.
ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದರು,
