ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ನಡೆದಿದೆ.

ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ 62 ವರ್ಷದ ನಾಗೇಶ್ (62) ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ನಾಗೇಶ್ ಅವರು ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು.

ಟೆಂಪೋವನ್ನು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.

ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದನ್ನು ನಿಲ್ಲಿಸಿ : cm ಸಿದ್ದರಾಮಯ್ಯ – Vishwanews24

ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು, ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಟೆಂಪೋ ಸೀಟ್ ನಲ್ಲಿ ನಾಗೇಶ್ ಅವರ ಮೊಬೈಲ್, ನಗದು, ಫೋಟೊ, ಚಪ್ಪಲಿ ದೊರಕಿದ್ದು, ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ಅವರ ದೇಹವಿರುವುದು ಖಾತ್ರಿ ಪಡಿಸಿ ಮೃತ ದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿತ್ತು.

ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಯಿತು.

ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಉಡುಪಿ: ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

ಅವರು ತೊಕ್ಕೊಟ್ಟು ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply