ಉಳ್ಳಾಲ :  ತಾಂತ್ರಿಕ ದೋಷದಿಂದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ – vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ :  ತಾಂತ್ರಿಕ ದೋಷದಿಂದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ

ಉಳ್ಳಾಲ : ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್‌ ಆಸಿಡ್‌ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ.

ಎಂಆರ್‌ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬೆಳಗಾವಿ: ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್‌ ಆಸಿಡ್‌ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ.

ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರ್‌ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಣಂತಿಯರ ಸಾವಿನ ಪ್ರಕರಣ : ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ : ಭರತ್ ಶೆಟ್ಟಿ ಕಳವಳ  – vishwanews24

 

Leave a Reply