ಉಳ್ಳಾಲ : ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ : ತನಿಖೆ ಚುರುಕು – ಪೊಲೀಸರಿಂದ ಇನ್ನೆರಡು ದಿನಗಳಲ್ಲಿ ಪತ್ತೆ ಹಚ್ಚುವ ಭರವಸೆ – vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ : ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣ : ತನಿಖೆ ಚುರುಕು – ಪೊಲೀಸರಿಂದ ಇನ್ನೆರಡು ದಿನಗಳಲ್ಲಿ ಪತ್ತೆ ಹಚ್ಚುವ ಭರವಸೆ 

ಉಳ್ಳಾಲ: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್‌ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂ ಕಮಿಷನರ್‌ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತನಿಖೆಯನ್ನು ಚುರುಕುಗೊಳಿಸಿದೆ.

ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಳ್ಳಾಲ ಪ್ರಖಂಡ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಮುಖಂಡರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತೆ ಧನ್ಯಾ ನಾಯಕ್‌ ಅವರಿಗೆ ಮನವಿ ಸಲ್ಲಿಸಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ವಾರಾಂತ್ಯದ ವೇಳೆಗೆ ಬಿಡುಗಡೆ – vishwanews24

ಪಿಎಚ್‌ಡಿ ಸಂಶೋಧನ ವಿದ್ಯಾರ್ಥಿನಿಯಾಗಿದ್ದ ಚೈತ್ರಾ ಫೆ. 17ರಂದು ಮಾಡೂರಿನ ಬಾಡಿಗೆ ಮನೆಯಿಂದ ಸ್ಕೂಟರ್‌ನಲ್ಲಿ ಹೊರಟು ಸುರತ್ಕಲ್‌ನಲ್ಲಿ ಸ್ಕೂಟರ್‌ ತ್ಯಜಿಸಿ ನಾಪತ್ತೆಯಾಗಿದ್ದಳು. ಆರಂಭದಲ್ಲಿ ಸಾಮಾನ್ಯ ನಾಪತ್ತೆ ಪ್ರಕರಣ ಎಂದು ಪರಿಗಣಿಸಿದ್ದ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಶೋಧ ಕಾರ್ಯ ನಡೆಸಿದ್ದರು. ಆದರೆ ಚೈತ್ರಾ ನಾಪತ್ತೆಯ ಹಿಂದೆ ಡ್ರಗ್‌ ಪೆಡ್ಲರ್‌ ಯುವಕನ ಕೈವಾಡವಿದೆ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದಾಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಆಕೆಯ ಮೊಬೈಲ್‌ ಲೊಕೇಷನ್‌ ಆಧಾರದಲ್ಲಿ ಬೆಂಗಳೂರು ಕಡೆ ತೆರಳಿರುವ ಮಾಹಿತಿಯನ್ನು ಕಲೆ ಹಾಕಿದ್ದರು. ಈ ನಡುವೆ ಆಕೆ ಮೆಜೆಸ್ಟಿಕ್‌ನಿಂದ ಬಸ್‌ ಇಳಿದು ಹೋಗಿರುವ ಮಾಹಿತಿ ಸಿಸಿಟಿವಿಯಲ್ಲಿ ಪತ್ತೆ ಹಚ್ಚಿದ್ದ ಪೊಲೀಸರು ಬೆಂಗಳೂರು ವ್ಯಾಪ್ತಿಯಲ್ಲಿ ಆಕೆಯ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಆಕೆಯನ್ನು ಪತ್ತೆ ಹಚ್ಚುವ ಭರವಸೆಯನ್ನು ಪೊಲೀಸರು ಇಟ್ಟುಕೊಂಡಿದ್ದಾರೆ.

ಹೃದಯಾಘಾತದಿಂದ ಪತ್ನಿ ನಿಧನ :ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ – vishwanews24

Leave a Reply