ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ; ಕುಟುಂಬಸ್ಥರಿಂದ ಅಂಗಾಂಗ ದಾನ – Vishwanews24
ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ; ಕುಟುಂಬಸ್ಥರಿಂದ ಅಂಗಾಂಗ ದಾನ
ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ.
ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು – Vishwanews24
ಮೃತ ಭೂಷಣ್ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನೆರವೇರಿತ್ತು. ತಂದೆ ಮಾರಪ್ಪ ರೈ ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮೃತ ಭೂಷಣ್ ತಾಯಿ ಜತೆಗೆ ನೆಲೆಸಿದ್ದರು.
ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಲಾಯಿಸಿ ಬರುತ್ತಿದ್ದ ಭೂಷನ್ ರೈ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಗುದ್ದಿತ್ತು.
ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಆಲ್ಟೋ ಕಾರಿನಲ್ಲಿದ್ದ ಐವರ ತಂಡ ತಕ್ಷಣ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದರು.
ತಲೆಗೆ ಗಾಯವಾಗಿರುವ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜೆಡಿಎಸ್ ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲ ಮನ್ನ : ಕುಮಾರಸ್ವಾಮಿ – Vishwanews24
