ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದಾಗ ಪೊಲೀಸರಿಗೆ ತಲವಾರು ತೋರಿಸಿ ರೌಡಿ ಶೀಟರ್ ಪರಾರಿ : ಓರ್ವ ಅರೆಸ್ಟ್ – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದಾಗ ಪೊಲೀಸರಿಗೆ ತಲವಾರು ತೋರಿಸಿ ರೌಡಿ ಶೀಟರ್ ಪರಾರಿ : ಓರ್ವ ಅರೆಸ್ಟ್ – Vishwanews24

ಉಳ್ಳಾಲ: ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳು ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದಾಗ ರೌಡಿಶೀಟರ್ ಪೊಲೀಸರಿಗೆ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ.

ಧರ್ಮನಗರ ನಿವಾಸಿ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು.

ಆರೋಪಿಯ ವಿರುದ್ದ ಹತ್ತಕ್ಕೂ ಅಧಿಕ ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದು, ಧರ್ಮನಗರದ ಮನೆಗೆ ತೆರಳಿದ್ದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್, ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನಿಜಾಮುದ್ದೀನ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.

ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ : ಸಿದ್ದರಾಮಯ್ಯ – Vishwanews24

ಇನ್ನು ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.

ಬೈಕಿನಲ್ಲಿದ್ದ ನಿಜಾಮುದ್ದೀನ್ ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ, ನಿಜಾಮುದ್ದೀನನನ್ನು ಬಂಧಿಸಿದ್ದು, ಈತ ಈ ಹಿಂದೆ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರ‌ಮುಖ ಆರೋಪಿಯಾಗಿದ್ದ ದಾವೂದ್ ಎಂಬಾತನ ಸಹೋದರನಾಗಿದ್ದಾನೆ ಎಂದು ತಿಳಿದು ಬಂದಿದೆ.