ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಕಾಂಡಮ್ ಹಾಗೂ ಅವಹೇಳನಕಾರಿ ಬರಹ ಪತ್ತೆ -Vishwanews24
ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಕಾಂಡಮ್ ಹಾಗೂ ಅವಹೇಳನಕಾರಿ ಬರಹ ಪತ್ತೆ -Vishwanews24
ಉಳ್ಳಾಲ: : ಉಳ್ಳಾಲದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡಮ್ ಮತ್ತು ನಿಂದನಾರ್ಹ ಬರಹಗಳುಲ್ಲ ಭಿತ್ತಿಪತ್ರವನ್ನು ಹಾಕಿ ವಿಕೃತಿ ಮೆರೆದಿದ್ದಾರೆ.
ಕೊರಗಜ್ಜ, ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಿಡಿಗೇಡಿಗಳು ಕಾಂಡೋಮ್ ಹಾಗೂ ಪ್ರಚೋದನಕಾರಿ ಬರಹ ಬರೆದು ಬಿಎಸ್ವೈ ಅವರ ಪುತ್ರ ವಿಜಯೇಂದ್ರನ ಭಾವಚಿತ್ರಕ್ಕೆ ಶಿಲುಬೆಯ ಹಾರ ಹಾಕಿ ವಿಕೃತಿಗೊಳಿಸಿರುವ ಭಿತ್ತಿಪತ್ರ ಪತ್ತೆಯಾಗಿದೆ.
ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತಿ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಹೊಂದಿದ್ದು, ಈ ಬಾರಿ ಸ್ವಲ್ಪ ತಡವಾಗಿ ಅಂದರೆ ಮಂಗಳವಾರ ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು, ಡಬ್ಬಿಯ ಒಳಗೆ ಕಾಂಡಾಮ್ಗಳು ಹಾಗೂ ಪ್ರಚೋಧನಕಾರಿ ಬರಹಗಳು ಇದ್ದಂತಹ ಪ್ಲೆಕ್ಸ್ ಒಂದು ಕಂಡು ಬಂದಿದೆ.ಎಂ. ರುದ್ರೇಶ್ ಎಂಬವರಿಗೆ ಶುಭಕೋರಿದ ಈ ಪತ್ರದಲ್ಲಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರವಿರುವ ಭಿತ್ತಿಪತ್ರವನ್ನು ವಿಕೃತಿಗೊಳಿಸಿದ್ದಾರೆ.
ಯಡಿಯೂರಪ್ಪ, ವಿಜಯೇಂದ್ರ ಅವರ ಕುತ್ತಿಗೆಗೆ ಶಿಲುಬೆ ಕ್ರಾಸನ್ನು ನೇತಾಡಿಸಿದಂತೆ ಚಿತ್ರ ಬಿಡಿಸಲಾಗಿದೆ. ಜತೆಗೆ ಪ್ರಚೋದನಕಾರಿ ಬರಹಗಳನ್ನು ಬರೆಯಲಾಗಿದೆ. ಕಿಡಿಗೇಡಿಗಳ ಕುಕೃತ್ಯಕ್ಕೆ ಭಕ್ತರ ಆಕ್ರೋಶ ವ್ಯಕ್ತವಾಗಿದ್ದು, ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಮಂಗಳವಾರ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಆಗ್ರಹಿಸಿದ್ದಾರೆ.
ಇನ್ನು ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕೊರಗಜ್ಜ, ಗುಳಿಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ದ ಕ್ಷೇತ್ರದ ಕಾರಣೀಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜ ಶಿಕ್ಷೆಸಬೇಕು ಎಂದು ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.
http://ನಾವು ಬಿಜೆಪಿ ಪಕ್ಷದ ಮುಂದೆ ಎಂದಿಗೂ ತಲೆ ತಗ್ಗಿಸುವುದಿಲ್ಲ: ಮಮತಾ ಬ್ಯಾನರ್ಜಿ -Vishwanews24

