ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

Featured, ದಕ್ಷಿಣ ಕನ್ನಡ

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಸಪ್ಟೆಂಬರ್ 30 ರಂದು ಸಂಭವಿಸಿದ ದುರಂತದಲ್ಲಿ ಮೃತ ಪಟ್ಟ ಹಳೆಯಂಗಡಿಯ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ ಗರಿಷ್ಟ 1.20 ಕೋಟಿ ರೂಪಾಯಿ ಪರಿಹಾರವನ್ನು ಮಂಜೂರು ಮಾಡಲಾಗಿದೆ ಹಾಗೂ ಅವರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗವನ್ನು ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದುರಂತ ನಡೆದಂದು ಹಾಗೂ ಮರುದಿನ ಮೃತರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ತಾನು ಮತ್ತು ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಡಾ. ವೈ. ಭರತ್ ಶೆಟ್ಟಿ, ಗ್ರಾಮ ಪಂಚಾಯತ್ ಮುಖಂಡರು ಮತ್ತು ಎಂಆರ್‌ಪಿಎಲ್‌ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮೃತರ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದೆವು ಎಂದು ತಿಳಿಸಿದರು. ಕೇಂದ್ರ ಪೆಟ್ರೋಲಿಯಂ ಸಚಿವರು ಮತ್ತು ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡಿ ಸಂತ್ರಸ್ತ ಕುಟುಂಬಕ್ಕೆ ನೆರವು ಒದಗಿಸುವ ಮೂಲಕ ಸರಕಾರ ಅವರ ಜತೆಗೆ ಇದೆ ಎಂಬುದನ್ನು ತೋರಿಸಿಕೊಟ್ಟಿದ್ದೇವೆ.

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಇನ್ನು ಎಂಆರ್‌ಪಿಎಲ್‌ನ ದ್ವಿತೀಯ ಹಂತದ ನೌಕರ ವೃಂದ ಅಂದರೆ ಗುತ್ತಿಗೆ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ದೀರ್ಘಕಾಲದ ಬೇಡಿಕೆಯು ಈಗ ಅಂತಿಮ ಹಂತದಲ್ಲಿದೆ. ಈ ಬಗ್ಗೆ 2025 ರ ಫೆಬ್ರವರಿ ತಿಂಗಳಲ್ಲಿ ಚರ್ಚೆಗಳು ಆರಂಭವಾಗಿದ್ದು, ಇದರಲ್ಲಿ ಎಂಆರ್‌ಪಿಎಲ್ ಅಧಿಕಾರಿಗಳು, ನೌಕರರ ಸಂಘದವರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಎಂಆರ್‌ಪಿಎಲ್ ಸಂಸ್ಥೆಯು ಒಎನ್‌ಜಿಸಿ ಜತೆ ಗುರುತಿಸಿಕೊಂಡಿರುವುದರಿಂದ, ಪ್ರಮುಖ ನೀತಿ ನಿರ್ಧಾರಗಳಿಗೆ ಒಎನ್‌ಜಿಸಿ ಮಂಡಳಿಯ ಅನುಮೋದನೆ ಅಗತ್ಯವಿರುತ್ತದೆ. ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಒಎನ್‌ಜಿಸಿ ಅಧ್ಯಕ್ಷರು ಮತ್ತು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳ ಜತೆ ಪ್ರಸ್ತಾಪಿಸಲಾಗಿದೆ. ಮುಂದಿನ ಒಂದು ತಿಂಗಳೊಳಗೆ ನೀತಿಯೊಂದನ್ನು ರೂಪಿಸಿ ಘೋಷಿಸಲಾಗುವುದು ಎಂದು ಎಂಆರ್‌ಪಿಎಲ್ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಸಂಸದ ಬೃಜೇಶ್ ಚೌಟ ತಿಳಿಸಿದ್ದಾರೆ .

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

Leave a Reply