ಎಂಆರ್ಪಿಎಲ್ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24
ಎಂಆರ್ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ
ಮಂಗಳೂರು: ಎಂಆರ್ಪಿಎಲ್ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ – ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ .
ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನಿಶ್ ಕರ್ಕರ ಎಂದು ಗುರುತಿಸಲಾಗಿದೆ. ಮನಿಶ್ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸ್ಥಳಕ್ಕೆ ಸಂಸದ ಕ್ಯಾಬ್ರಿಜೇಶ್ ಚೌಟ ಮತ್ತು ಪ್ರಮುಖ ಅಧಿಕಾರಿಗಳು ಭೇಟಿ ನೀಡಿದ್ದು ಘಟನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಇನ್ನು ಸ್ಫೋಟದ ತೀವ್ರತೆಗೆ ಜೋಕಟ್ಟೆ ಈದ್ಗಾ ಮಸೀದಿ, ಪೇಜಾವರ ಚರ್ಚ್, ಸೇಂಟ್ ಜೋಸೆಫ್ ಕಾಳಾವರ ಚರ್ಚ್ ಜೋಕಟ್ಟೆ, ಜೋಕಟ್ಟೆ ಮಸೀದಿ ಹಾಗು ಸ್ಥಳೀಯ ಹಲವು ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಇನ್ನು ಸ್ಫೋಟದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಮನೆಗಳು ಕಂಪಿಸಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು.
