ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 7 ಕೋಟಿ ರೂಪಾಯಿ ವಂಚನೆ ;ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ – Vishwanews24

Featured, ಉಡುಪಿ, ರಾಜ್ಯ ನ್ಯೂಸ್

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 7 ಕೋಟಿ ರೂಪಾಯಿ ವಂಚನೆ ;ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಬೆಂಗಳೂರು: ಬೈಂದೂರಿನ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಖಚಿತ ಮಾಹಿತಿಯನ್ವಯ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು‌ ತಿಳಿದುಬಂದಿದೆ.

ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಗಗನ್ ಕಡೂರು, ಪ್ರಸಾದ್ ಸಹಿತ ಒಟ್ಟು ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Leave a Reply