ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಎಪ್ರಿಲ್ 27 ರಂದು ರಾಹುಲ್ ಗಾಂಧಿ ರೋಡ್ ಶೋ

ಮಂಗಳೂರು:  ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸ ಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಪರ ಪ್ರಚಾರ ನಡೆಸಲು ಏ.26 ಕ್ಕೆ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ – Vishwanews24

Leave a Reply