ಎರ್ಮಾಳು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ , ಅಪಾಯದಿಂದ ಪಾರು – vishwanews24

Featured, ಉಡುಪಿ

ಎರ್ಮಾಳು : ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಅಪಾಯದಿಂದ ಪಾರಾದ ಚಾಲಕ

ಎರ್ಮಾಳು : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಚಾಲಕ‌ ನಿದ್ದೆಯ ಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಏಕಾಏಕಿಯಾಗಿ ರಸ್ತೆಯ ಬದಿಯ ಮೋರಿಯ ದಂಡೆಗೆ ಬಡಿದಿದೆ. ಚಾಲಕ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು, ಮರಳಿ ಉಡುಪಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ರಾಜ್ಯ ಆಹಾರ ಇಲಾಖೆ ಸ್ಪಷ್ಟನೆ – vishwanews24 https://wp.me/p9KQap-oK6

ದಂಡೆಗೆ ಬಡಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂದ ಹೆಜಮಾಡಿ ಟೋಲ್ ಸಿಬ್ಬಂದಿ ಹಾಗೂ ಪೊಲೀಸರು ಹೆದ್ದಾರಿಗೆ ಅಡ್ಡವಾಗಿ ಉರುಳಿಬಿದ್ದ ಕಾರನ್ನು ಯಂತ್ರದ ಮೂಲಕ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply