ಎಲ್ಲರೂ ಒಗ್ಗಟ್ಟಿನಿಂದ ಒಂದಾಗಿ ಹೋರಾಟ ನಡೆಸುವ ಮೂಲಕ ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲಿಸಬೇಕು : ರಾಹುಲ್ ಗಾಂಧಿ – Vishwanews24

Featured, ರಾಜ್ಯ ನ್ಯೂಸ್

ನೀವು ಕರೆದರೆ ನಾನು ರಾಜ್ಯದ ಮೂಲೆ ಮೂಲೆಗೂ ಬರುತ್ತೇನೆ..

ಒಂದು ಸ್ಥಾನ ಕೂಡ ಕಡಿಮೆ ಆಗಬಾರದು, ಸ್ಪಷ್ಟ ಬಹುಮತ ಪಡೆಯುವ ಗುರಿ ಹೊಂದಬೇಕು..

ಬೆಂಗಳೂರು: ಎಲ್ಲರೂ ಒಗ್ಗಟ್ಟಿನಿಂದ ಒಂದಾಗಿ ಹೋರಾಟ ನಡೆಸುವ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಿಸಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು. ಸ್ಪಷ್ಟ ಬಹುಮತ ಪಡೆಯುವ ಗುರಿ ಹೊಂದಬೇಕು ಎಂದು ರಾಜ್ಯದ ನಾಯಕರಿಗೆ ರಾಷ್ಟ್ರ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ಕೊಟ್ಟಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ವಿಧಾನಸಭೆ ಚುನಾವಣೆಗೆ ರಣೋತ್ಸಹ ತುಂಬಿ, ಚುನಾವಣೆ ಗೆಲ್ಲುವ ಸೂತ್ರಗಳನ್ನು ಬಿಚ್ಚಿಟ್ಟರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ , ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬಿಜೆಪಿ ಪಕ್ಷದ ಕೋಮುವಾದ ಮತ್ತು ದ್ವೇಷದ ರಾಜಕಾರಣದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ನಿರಂತರವಾಗಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ವಿಧಾನಸಭೆ ಚುನಾವಣೆಯಲ್ಲಿ 150ಕ್ಕಿಂತ ಒಂದು ಸ್ಥಾನವೂ ಕಡಿಮೆಯಾಗಬಾರದು. ಅರ್ಹತೆ ಮತ್ತು ನಿಷ್ಠಾವಂತ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಅಧಿಕಾರಕ್ಕೆ ಬಂದ ನಂತರವೂ ಪಕ್ಷಕ್ಕೆ ರಕ್ತ ಬಸಿಯುವವರಿಗೆ ಆದ್ಯತೆ ನೀಡಲಾಗುವುದು. ಪಕ್ಷದ ಹಿರಿಯ ನಾಯರೆಲ್ಲರೂ ಒಟ್ಟಿಗೆ ಹೋಗಬೇಕು. ಪ್ರತಿ ಕ್ಷೇತ್ರಕ್ಕೂ ನಾಯಕರು ಭೇಟಿ ಕೊಡಬೇಕು. ನೀವು ಕರೆದರೆ ನಾನು ರಾಜ್ಯದ ಮೂಲೆ ಮೂಲೆಗೂ ಬರುತ್ತೇನೆ. ಆದರೆ 150ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.

ರೈತ ವಿರೋಧಿ ಕಾಯ್ದೆ ತಂದ ಬಿಜೆಪಿ ವಿರುದ್ದ ಹಾಗೂ ಕರ್ನಾಟಕದಲ್ಲಿ ಉದ್ಯೋಗ ಅವಕಾಶ ಇಲ್ಲ ಎನ್ನುವುದು ಚುನಾವಣೆ ವಿಚಾರ ಆಗಬೇಕು. ಆ ನಿಟ್ಟಿನಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.

ವಿಹಿಪ, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು : ಎಚ್‌.ಡಿ. ಕುಮಾರಸ್ವಾಮಿ – Vishwanews24

Leave a Reply