ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24
ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು : ಯುಪಿ ಸರ್ಕಾರ ಆದೇಶ – Vishwanews24
ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.
ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಯೋಗ ದಿನವನ್ನು ಗ್ರಾಮ ಪಂಚಾಯತ್ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.
ಜೂನ್ 27 ರಿಂದ ಜುಲೈ 4ರವರೆಗೆ SSLC ಪೂರಕ ಪರೀಕ್ಷೆ ; ವೇಳಾಪಟ್ಟಿ ಪ್ರಕಟ – Vishwanews24
