ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್ ಮಾರ್ಕ್ಸ್ ಶೇ. 33ಕ್ಕೆ ಇಳಿಕೆ : ಮಧು ಬಂಗಾರಪ್ಪ – vishwanews24

Featured, ರಾಜ್ಯ ನ್ಯೂಸ್

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್ ಮಾರ್ಕ್ಸ್ ಶೇ.33ಕ್ಕೆ ಇಳಿಕೆ ; 2025-26ರಿಂದಲೇ ಈ ನಿಯಮ ಜಾರಿಗೆ : ಮಧು ಬಂಗಾರಪ್ಪ 

ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಮತ್ತು ಸಿಬಿಎಸ್‌ಇ ಹಾಗೂ ನೆರೆ ರಾಜ್ಯಗಳ ಏಕರೂಪ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ.

ಚಿಕ್ಕಮಗಳೂರು : ಪತ್ನಿಯನ್ನು ಕೊಲೆಗೈದು ಕೊಳವೆಬಾವಿಯಲ್ಲಿ ಮೃತದೇಹ ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವನ ಬಂಧನ – vishwanews24

ಎಸ್‌ಎಸ್‌ಎಲ್‌ಸಿ (SSLC): ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಟ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು.

ದ್ವಿತೀಯ ಪಿಯುಸಿ (II PUC): 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ ದಾಖಲು – vishwanews24

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

Leave a Reply