ಎಸ್ಎಸ್ಎಲ್ಸಿ ಫಲಿತಾಂಶ : ಬಿಜೆಪಿ ಬದಲು ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಿದ್ದಾರೆ ದಕ್ಷಿಣ ಕನ್ನಡ ಮೊದಲನೇ ಸ್ಥಾನ ಬರುತಿತ್ತು :ಸಚಿವ ರೇವಣ್ಣ -Vishwanews24
ಹಾಸನ: ಬಿಜೆಪಿ ಪಕ್ಷಕ್ಕೆ ವೋಟ್ ಹಾಕಿದ್ದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 7ನೇ ಸ್ಥಾನ ಬಂದಿದೆ ಎಂದು ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಪ್ರೌಢ ಶಿಕ್ಷಣ ಮಂಡಳಿಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಘೋಷಿಸಿದ್ದರು. ಉಡುಪಿ ಐದನೇ ಸ್ಥಾನವನ್ನು ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆ 7 ಸ್ಥಾನವನ್ನು ಪಡೆದಿತ್ತು.
ಹಾಸನದಲ್ಲಿ ಈ ಸಂಬಂಧ ಮಾತನಾಡಿದ ರೇವಣ್ಣ, ಪ್ರತಿವರ್ಷವೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿರುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ 7ನೇ ಸ್ಥಾನವನ್ನು ಪಡೆದುಕೊಂಡಿದೆ.
ಇದಕ್ಕೆ ಕಾರಣ ಅಲ್ಲಿನ ಜನತೆ ಬಿಜೆಪಿಗೆ ವೋಟ್ ಹಾಕಿದ್ದಾರೆ. ಅಲ್ಲಿನ ಜನರು ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಿದ್ದಾರೆ ಅವರು ಅದೇ ಸ್ಥಾನದಲ್ಲಿ ಇರುತ್ತಿದ್ದರು. ಅದಲ್ಲದೆ ಹಾಸನ ರಾಜ್ಯಕ್ಕೆ ಪ್ರಥಮ ಸ್ಥಾನ ಬರಲು ತಮ್ಮ ಪತ್ನಿ ಭವಾನಿ ರೇವಣ್ಣ ಅವರು ಪ್ರಮುಖರು ಎಂದು ಹೇಳಿಕೆ ನೀಡಿದ್ದಾರೆ.
