ಏ.27ರ ಬಳಿಕ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಏ.27ರ ಬಳಿಕ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಅನ್ನು ಏಪ್ರಿಲ್ 27ರಂದು ನಡೆಸಲಿದ್ದು, ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಸೂಚನೆ ಕೂಡ ನೀಡಲಿದ್ದಾರೆ. ಈ ಬಳಿಕ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು.

ಇನ್ನು ತಜ್ಞರು ಈಗಾಗಲೇ ವೈರಸ್ ಯಾವ ಮಾದರಿ ಇದೆ ಎಂಬುದನ್ನು ಪತ್ತೆ ಹಚ್ಚಿದ್ದು, ತಜ್ಞರ ಸಲಹೆ ಆಧಾರದ ಮೇಲೆ ಪ್ರಧಾನಿಯವರೊಂದಿಗಿನ ವೀಡಿಯೋ ಸಂವಾದದ ಬಳಿಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಕ್ರಮದ ನಿರ್ಧಾರ ಪ್ರಕಟಿಸಲಾಗುವು ಎಂದು ಹೇಳಿದ್ದಾರೆ.

Leave a Reply